ಮೂಡುಬಿದಿರೆ: ಡಿ. ದೇವರಾಜ ಅರಸು ಬದುಕು ಮತ್ತು ರಾಜಕಾರಣದ ಬಗ್ಗೆ ನಿಡ್ಡೋಡಿ ಚಾವಡಿಮನೆ ಡಾ. ಜಗನ್ನಾಥ ಶೆಟ್ಟಿ ಅವರು ಬರೆದ 'ಕರ್ನಾಟಕ ಧ್ರುವತಾರೆ' ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ರವಿವಾರ ಇಲ್ಲಿನ ಸಮಾಜ ಮಂದಿರದಲ್ಲಿ ನಡೆಯಿತು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ| ಎಂ. ಮೋಹನ ಆಳ್ವ ಪುಸ್ತಕ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಪ್ರೊ. ಕುರಿಯನ್ ಕೃತಿ ಪರಿಚಯ ಮಾಡಿದರು.
ಮೂಡುಬಿದಿರೆ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷ ವೇಣುಗೋಪಾಲ ಅಧ್ಯಕ್ಷತೆ ವಹಿಸಿದ್ದರು.
ಗ್ರಂಥಕರ್ತ ನಿಡ್ಡೋಡಿ ಚಾವಡಿಮನೆ ಡಾ. ಜಗನ್ನಾಥ ಶೆಟ್ಟಿ ಮಾತನಾಡಿ ಪುಸ್ತಕ ಬರವಣಿಗೆಯ ಪ್ರಕ್ರಿಯೆಯ ಬಗ್ಗೆ ಮಾಹಿತಿ ನೀಡಿದರು.
ಮೂಡುಬಿದಿರೆ ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್, ಎಂಸಿಎಸ್ ಬ್ಯಾಂಕಿನ ಅಧ್ಯಕ್ಷರಾದ ಬಾಹುಬಲಿ ಪ್ರಸಾದ್, ಮೂಡುಬಿದಿರೆ ತಾಲೂಕು ಅಖಿಲ ಭಾರತ ಸಾಹಿತ್ಯ ಪರಿಷತ್ ಅಧ್ಯಕ್ಷ ಸದಾನಂದ ನಾರಾವಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಪತ್ರಕರ್ತ ಧನಂಜಯ ಮೂಡುಬಿದಿರೆ ಕಾರ್ಯಕ್ರಮ ನಿರೂಪಿಸಿದರು. ಪತ್ರಕರ್ತ ಎಂ. ಗಣೇಶ ಕಾಮತ್ ಸ್ವಾಗತಿಸಿದರು. ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಸಂತೋಷ್ ವಂದಿಸಿದರು.
ಕಾರ್ಯಕ್ರಮದ ನಂತರ ಬಹುಭಾಷಾ ಕವಿಗೋಷ್ಠಿ ನಡೆಯಿತು.