ಮೂಡುಬಿದಿರೆ: ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಘೋಷಣೆಗೆ ಕ್ಷಣ ಗಣನೆ ನಡೆಯುತ್ತಿರುವ ಹೊತ್ತಲ್ಲಿ ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ತನ್ನ ವಿರುದ್ಧ ಯಾವುದೇ ಮಾನಹಾನಿಕಾರಕ ವಿಡಿಯೋ, ಸುದ್ದಿ, ಪೊಟೋ ಪ್ರಕಟ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ 40 ಕ್ಕೂ ಹೆಚ್ಚು ಮಾಧ್ಯಮಗಳಲ್ಲಿ ಯಾವುದೇ ಆಕ್ಷೇಪಕಾರಿ ಸುದ್ದಿ ಪ್ರಕಟಿಸಸಂತೆ ಉಮನಾಥ ಕೋಟ್ಯಾನ್ ಅವರು ಜೆ.ಎಂ.ಎಫ್.ಸಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಈ ಧಿಡೀರ್ ಬೆಳವಣಿಗೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ವಿವಿಧ ರೀತಿಯಲ್ಲಿ ಚರ್ಚೆಗಳು ಆರಂಭವಾಗಿದೆ
Tags
BJP