ಮೂಡುಬಿದಿರೆ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು ಹಾಲಿ ಶಾಸಕ ಉಮಾನಾಥ ಎ. ಕೋಟ್ಯಾನ್ ಅವರಿಗೆ ಮೂಡುಬಿದಿರೆಯಲ್ಲಿ ಸ್ಪರ್ಧಸಲು ಬಿಜೆಪಿ ಹೈಕಮಾಂಡ್ ಹಸಿರು ನಿಶಾನೆ ತೋರಿದೆ.
ಇದರಿಂದಾಗಿ ಬಹಳ ದಿನಗಳ ಜನರ ನಿರೀಕ್ಷೆಗೆ ತೆರೆ ಬಿದ್ದಿದೆ. ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ. ಅವರು ಕೂಡಾ ಬಿಜೆಪಿ ಸ್ಪರ್ಧಾಕಾಂಕ್ಷಿಯಾಗಿದ್ದು, ಹೈಕಮಾಂಡ್ ಉಮಾನಾಥ ಎ. ಕೋಟ್ಯಾನ್ ಅವರಿಗೆ ಹಸಿರು ನಿಶಾನೆ ತೋರಿದೆ.
ಇದೀಗ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ, ಬಿಜೆಪಿಯಿಂದ ಉಮಾನಾಥ ಕೋಟ್ಯಾನ್, ಆಮ್ ಆದ್ಮಿ ಪಕ್ಷದಿಂದ ವಿಜಯನಾಥ ವಿಠಲ ಶೆಟ್ಟಿ ಅವರು ಅಧಿಕೃತವಾಗಿ ಘೋಷಣೆಯಾಗಿದ್ದು ಚುನಾವಣಾ ಕಣ ರಂಗೇರುತ್ತಿದೆ.