ಮಂಗಳೂರು: ಬಿಜೈ ರಾಜನ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ರವಿ ಪೂಜಾರಿಯ ವಿರುದ್ದ ದಾಖಲಾಗಿದ್ದ ಆರೋಪಗಳಿಂದ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಪೊಲೀಸರು ತನಿಖೆ ನಡೆಸಿ ರವಿ ಪೂಜಾರಿ ಮತ್ತು ಅತನ ಸಹಚರರ ಮೇಲೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು. ಅಲ್ಲದೇ ಘಟನೆ ಬಳಿಕ ರವಿಪೂಜಾರಿ ವಿದೇಶದಲ್ಲಿ ತಲೆಮರೆಸಿ ಕೊಂಡಿದ್ದ. ಬಳಿಕ 2021 ನೇ ಇಸವಿಯಲ್ಲಿ ರವಿ ಪೂಜಾರಿಯನ್ನು ಸೆನೆಗಲ್‌ನಲ್ಲಿ ಬಂಧಿಸಿ ಭಾರತಕ್ಕೆ ಹಸ್ತಾಂತರಿಸಲಾಗಿತ್ತು. ನಂತರ ಆತನ ವಿರುದ್ಧ ದಾಖಲಾದ ಎಲ್ಲ ಪ್ರಕರಣಗಳಲ್ಲಿ ಪೊಲೀಸರು ಹೆಚ್ಚುವರಿ ತನಿಖೆ ನಡೆಸಿ ಹೆಚ್ಚುವರಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ರವಿಪೂಜಾರಿ ವಿರುದ್ದ ದಾಖಲಾದ ಎರಡು ಪ್ರಕರಣಗಳಲ್ಲಿ ಪ್ರಿನ್ಸಿಪಾಲ್ ಸೀನಿಯರ್ ಸಿವಿಲ್ ಜಡ್ಜ್ ಹಾಗೂ ಒಂದು ಪ್ರಕರಣದಲ್ಲಿ ಜೆ.ಎಂ.ಎಫ಼್.ಸಿ. ನ್ಯಾಯಾಲಯ ಒಟ್ಟು 4 ಪ್ರಕರಣಗಳಲ್ಲಿ ರವಿಪೂಜಾರಿಯನ್ನು ಖುಲಾಸೆ ಗೊಳಿಸಿ ತೀರ್ಪು ನೀಡಿದೆ. ಬಿಜೈ ರಾಜಾ ಕೊಲೆ ಪ್ರಕರಣಗಳಲ್ಲಿ ವಿಚಾರಣೆ ನಡೆಸಿದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಸ್ವಾಮಿ ರವಿ ಪೂಜಾರಿಯನ್ನು ಖುಲಾಸೆ ಗೊಳಿಸಿ ತೀರ್ಪು ನೀಡಿರುತ್ತಾರೆ.
ಇನ್ನು ರವಿ ಪೂಜಾರಿಯ ವಿರುದ್ದ ಹಲವು ಪ್ರಕರಣಗಳು ಮಂಗಳೂರು ಹಾಗೂ ಬೆಂಗಳೂರಿನಲ್ಲಿ ತನಿಖೆಗೆ ಬಾಕಿ ಇದೆ. ರವಿ ಪೂಜಾರಿ ಪರವಾಗಿ ಮಂಗಳೂರಿನ ಖ್ಯಾತ ವಕೀಲರಾದ ಬಿ. ಅರುಣ್ ಬಂಗೇರ ಮತ್ತು ರಿಹಾನಾ ಪರ್ವೀನ್ ವಾದಿಸಿದ್ದರು.