ಅಕ್ರಮ ಗೋಮಾಂಸ ಮಾರಾಟ ಮಾಡುತಿದ್ದ ಇಬ್ಬರು ಪೊಲೀಸ್ ವಶಕ್ಕೆ


ಅಕ್ರಮ ಗೋಮಾಂಸ ಮಾರಾಟವನ್ನು ಪತ್ತೆಹಚ್ಚಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಕಲ್ಲಡ್ಕದಲ್ಲಿ ಇಂದು ಮುಂಜಾನೆ ನಡೆದಿದೆ.

ಬಜರಂಗದಳ ಕಲ್ಲಡ್ಕ ಪ್ರಖಂಡದ ಮಾಹಿತಿ ಮೇರೆಗೆ ಇಂದು ಮುಂಜಾನೆ ಕಲ್ಲಡ್ಕ ಮದಕ ಬಳಿ ಬಿಸಿ ರೋಡ್ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಅಂದಾಜು 2 ಕಿಂಟ್ಟಾಲ್ ಗೋ ಮಾಂಸ, ಒಂದು ಆಟೋ , ಆಲ್ಟೋ ಕಾರು ಹಾಗೂ ಬೈಕ್ ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳ ಪೈಕಿ ಓರ್ವ ಪರಾರಿಯಾಗಿದ್ದಾನೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನೂ ತಿಳಿಯಬೇಕಾಗಿದೆ.

Previous Post Next Post

Contact Form