![]() |
(Representational Image) |
ಮೂಡುಬಿದಿರೆ: ಇಲ್ಲಿನ ವಿದ್ಯಾಗಿರಿ ಮೂಲ್ಕಿ ಕ್ರಾಸ್ ಬಳಿ ಗಾಂಜಾ ಮಾರಾಟ ಮಾಡಲು ತಯಾರಿ ನಡೆಸುತ್ತಿದ್ದ ಯುವಕನನ್ನು ಪೊಲೀಸರು ಸೆರೆ ಹಿಡಿದಿದ್ದಾರೆ.
ಮಂಗಳೂರಿನ ಪ್ರಿನ್ಸ್ ಸೋನ್ಕರ್ (20) ಆರೋಪಿ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು ಆರೋಪಿಯಿಂದ ಪೊಲೀಸರು 15 ಸಾವಿರ ರೂ ಬೆಲೆಬಾಳುವ 200ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.