ಮೂಡುಬಿದಿರೆ: ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆಗಾಗಿ ನೀಡುವ ಮುಖ್ಯಮಂತ್ರಿ ಪದಕಕ್ಕೆ ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರು ಪಾತ್ರರಾಗಿದ್ದಾರೆ. ಅರ್ಹ ಅಧಿಕಾರಿಗೆ ಸಂದ ಸೂಕ್ತ ಗೌರವ ಎಂದು ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಖಡಕ್ ಅಧಿಕಾರಿಯಾಗಿರುವ ಜೊತೆಗೆ ಜನಸಾಮಾನ್ಯರಿಗೆ ಉತ್ತಮ ಸ್ಪಂದನೆ ಕೊಡುವ ಪೊಲೀಸ್ ಅಧಿಕಾರಿಯಾಗಿಯೂ ಗುರುತಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿರುವ ಸಂದೇಶ್ ಅವರು ಉತ್ತಮ ಅಧಿಕಾರಿಯಾಗಿ ಇಲಾಖೆ ಹಾಗೂ ಸಾರ್ವಜನಿಕ ವಲಯದಲ್ಲಿ ಗಮನಸೆಳೆದಿದ್ದಾರೆ. ಪ್ರಸ್ತುತ ಅವರು ಮೂಡುಬಿದಿರೆಯಲ್ಲಿ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ರಾಜ್ಯದ 126 ಮಂದಿ ಪೊಲೀಸ್ ಅಧಿಕಾರಿಗಳು 2023 ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದು, ಅವರಲ್ಲಿ ಸಂದೇಶ್ ಪಿ.ಜಿ. ಅವರೂ ಒಬ್ಬರಾಗಿದ್ದಾರೆ.