ಕೆಪಿಸಿಸಿ ಪ್ರಚಾರ ಸಮಿತಿ ಸಂಯೋಜಕರಾಗಿ ಪದ್ಮಪ್ರಸಾದ್ ಜೈನ್



ಮೂಡುಬಿದಿರೆ: ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಪ್ರಚಾರ ಸಮಿತಿ ಸಂಯೋಜಕರಾಗಿ ಮೂಡುಬಿದಿರೆಯ ಪದ್ಮಪ್ರಸಾದ್ ಜೈನ್ ಅವರು ನೇಮಕಗೊಂಡಿದ್ದಾರೆ.

ರಾಜ್ಯದಲ್ಲಿ ಸುಮಾರು 33 ಮಂದಿಯನ್ನು ಪ್ರಚಾರ ಸಮಿತಿಯ ಸಂಯೋಜಕರನ್ನಾಗಿ ನೇಮಕಗೊಳಿಸಿದ್ದು ಮೂಡುಬಿದಿರೆಯಿಂದ ಪದ್ಮಪ್ರಸಾದ್ ಅವರನ್ನು ನೇಮಕಗೊಳಿಸಲಾಗಿದೆ.

ಈ ನೇಮಕಾತಿಯನ್ನು ಎಐಸಿಸಿ ಅಧ್ಯಕ್ಷರು ಅನುಮೋದಿಸಿದ್ದಾರೆಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯಾಯವಾದಿಯಾಗಿರುವ ಪದ್ಮಪ್ರಸಾದ್ ಜೈನ್ ಅವರು ಕಳೆದ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುತ್ತಾ ಬಂದಿದ್ದು ವಿದ್ಯಾರ್ಥಿ ಕಾಂಗ್ರೆಸ್, ಯುವ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಹಾಗೂ ಕೆಪಿಸಿಸಿಯಲ್ಲಿ ರಾಜ್ಯಮಟ್ಟದಲ್ಲಿ ವಿವಿಧ ಜವಾಬ್ಧಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಾ ಬಂದಿದ್ದಾರೆ.

Previous Post Next Post

Contact Form