ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಆಸ್ಪತ್ರೆ ಕಡೆಗೆ ಹೋಗುವ ರಸ್ತೆಯಲ್ಲಿನ ಖಾಸಗಿ ಕಟ್ಟಡದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು ಸಂತ್ರಸ್ತ ಮಹಿಳೆಯನ್ನು ರಕ್ಷಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಮೂಡುಬಿದಿರೆ ಸ್ವರಾಜ್ಯ ಮೈದಾನ ಬಳಿಯ ರಾಜೇಶ್ ಬೋವಿ (31), ನಾರಾವಿಯ ಭರತ್ ಜೈನ್ ಬಂಧಿತ ಆರೋಪಿಗಳು.
ಭರತ್ ಜೈನ್ ಎಂಬಾತ ಸಂತ್ರಸ್ತ ಮಹಿಳೆಯನ್ನು ಇಟ್ಟುಕೊಂಡು, ಗ್ರಾಹಕರಿಗೆ ತೋರಿಸಿ ವೇಶ್ಯಾವಾಟಿಕೆಯನ್ನು ನಡೆಸುತ್ತಿದ್ದ ಆರೋಪವಿದ್ದು ಮೂಡುಬಿದಿರೆ ಠಾಣಾ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ಇವರು ಮಂಗಳವಾರ ಸಿಬ್ಬಂಧಿಗಳೊಂದಿಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
