ಬೆಳ್ತಂಗಡಿ: ಇಲ್ಲಿನ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ, ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಅಕ್ಟೋಬರ್ 15, ಬುಧವಾರ ನಿಧನರಾದರು.
ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ಯಶೋಧರ ಶೆಟ್ಟಿ ಅವರ ಪುತ್ರಿ ಸಾನ್ವಿ ಶೆಟ್ಟಿ (17) ಮೃತ ವಿದ್ಯಾರ್ಥಿನಿ.
ಸಾನ್ವಿ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ನೀಡಿದರೂ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಾಣಿಸಲಿಲ್ಲ. ಬುಧವಾರ ಬೆಳಗ್ಗೆ ಅವರು ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ
Tags
Obituary
