ಜೋಯ್ಲಿನ್ ಲೋಬೊಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ



ರಾಜ್ಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್‌ನಲ್ಲಿ ಗಣನೀಯ ಸಾಧನೆ ಮಾಡಿದ ಮೂಡುಬಿದಿರೆ ತಾಲೂಕಿನ ವಾಲ್ಪಾಡಿ ಗ್ರಾಮದ ಜೋಯ್ಲಿನ್‌ ಮ್ಯುರಲ್ ಲೋಬೊ ಅವರಿಗೆ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. 

ಮೂಡುಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ವಿದ್ಯಾಭ್ಯಾಸ, ಅಣ್ಣಾಮಲೈ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದ ಜೋಯ್ಲಿನ್ ಅವರು ಶಾಲಾ ಕಾಲೇಜಿನ ಹಂತದಲ್ಲಿಯೇ ಅಥ್ಲೆಟಿಕ್ಸ್‌ನ ತ್ರಿವಿಧ ಜಿಗಿತ ವಿಭಾಗದಲ್ಲಿ ಆಸಕ್ತಿಯನ್ನು ಬೆಳೆಸಿಕೊಂಡಿದ್ದು, ನಿರ್ದಿಷ್ಟ ಗುರಿಯೊಂದಿಗೆ ಸಾಧನೆ ಮಾಡಿದ್ದಾರೆ. 

ಅಂತರಾಷ್ಟ್ರೀಯ ಮಟ್ಟದಲ್ಲಿ ೫ ಬಾರಿ ಭಾರತವನ್ನು ಪ್ರತಿನಿಧಿಸಿದ್ದರೆ, ರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ೨೦ ಬಾರಿ ಕರ್ನಾಟಕವನ್ನು ಪ್ರತಿನಿಧಿಸಿ ರಾಜ್ಯಮಟ್ಟದ ದಾಖಲೆಗಳನ್ನು ಹೊಂದುವ ಜೊತೆಗೆ ರಾಷ್ಟ್ರೀಯ ಚಾಂಪಿಯನ್‌ ಆಗಿದ್ದಾರೆ. ಇದರಲ್ಲಿ ಅಖಿಲ ಭಾರತ ವಿಶ್ವವಿದ್ಯಾಲಯ ಮಟ್ಟದ ಚಿನ್ನದ ಪದಕವೂ ಸೇರಿದೆ.

ರಾಜ್ಯಮಟ್ಟದ ವಿವಿಧ ಕ್ರೀಡಾಕೂಟಗಳಲ್ಲಿ ೬ ಬಾರಿ ಹಾಗೂ ಆಲ್‌ ಇಂಡಿಯಾ ಪಬ್ಲಿಕ್‌ ಸೆಕ್ಟರ್‌ ಸೆಕ್ಟರ್‌ ಕ್ರೀಡಾ ಕೂಟದಲ್ಲಿ ೧೭ ಬಾರಿ ಭಾರತೀಯ ಜೀವವಿಮಾ ನಿಗಮವನ್ನು ಪ್ರತಿನಿಧಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಅಥ್ಲೆಟಿಕ್ಸ್‌ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಗಾಗಿ ಹಲವಾರು ಕ್ರೀಡಾ ದಾಖಲೆಗಳು ಜೋಯ್ಲಿನ್ ಲೋಬೊ ಅವರ ಹೆಸರಿನಲ್ಲಿ ಇವೆ.


Previous Post Next Post

Contact Form