ಧರ್ಮಸ್ಥಳ ಬುರುಡೆ ಕೇಸ್ – ಚಿನ್ನಯ್ಯನಿಗೆ ಜಾಮೀನು ಮಂಜೂರು


ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದ ಆರೋಪಿಗೆ ಚಿನ್ನಯ್ಯನಿಗೆ ಜಾಮೀನು ಸಿಕ್ಕಿದೆ.

ವಿಶೇಷ  ತನಿಖಾ ತಂಡ ತನಿಖಾ ವರದಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ ಬೆನ್ನಲ್ಲೇ ಚಿನ್ನಯ್ಯ ಜಾಮೀನಿಗೆ  ಅರ್ಜಿ ಸಲ್ಲಿಸಿದ್ದ. ಅರ್ಜಿಯನ್ನು ಪುರಸ್ಕರಿಸಿದ ಮಂಗಳೂರಿನಲ್ಲಿರುವ ಜಿಲ್ಲಾ ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿದೆ.

ಆಗಸ್ಟ್ 23 ರಂದು ಸುಧೀರ್ಘ ವಿಚಾರಣೆ ಬಳಿಕ ಬುರುಡೆ ಕೇಸ್ ನಲ್ಲಿ ಅನಾಮಿಕ ದೂರುದಾರ ಚಿನ್ನಯ್ಯ ಬಂಧನವಾಗಿತ್ತು. ಸೆಪ್ಟೆಂಬರ್ 6 ರಂದು ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಶಿವಮೊಗ್ಗ ಜೈಲಿಗೆ ಚಿನ್ನಯ್ಯನನ್ನು ಕರೆತರಲಾಗಿತ್ತು.

1 ಲಕ್ಷ ರೂ. ಬಾಂಡ್ ಸೇರಿ 12 ಷರತ್ತು ವಿಧಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

Previous Post Next Post

Contact Form