ಮೂಡುಬಿದಿರೆ ಕಾಳಿಕಾಂಬ ಮಹಿಳಾ ಸಮಿತಿ ರಜತ ಸಂಭ್ರಮ

 


ಮೂಡುಬಿದಿರೆ : ಇಲ್ಲಿನ‌ ಕಾಳಿಕಾಂಬ ಮಹಿಳಾ ಸಮಿತಿಯ ರಜತ ಸಂಭ್ರಮದ ಅಂಗವಾಗಿ ಗುರುಮಠ ಕಾಳಿಕಾಂಬ ದೇವಸ್ಥಾನದಲ್ಲಿ ನವೆಂಬರ್ 16ರಂದು ಸಾಮೂಹಿಕ ದುರ್ಗಾ ಪೂಜೆ ಹಾಗೂ ಅವಿಭಜಿತ ದ.ಕ. ಜಿಲ್ಲಾ ಮಟ್ಟದ ವಿಶ್ವಕರ್ಮ ಮಹಿಳಾ ಸಮಾವೇಶ ನಡೆಯಲಿದೆ.

ಕಾಳಿಕಾಂಬ ಮಹಿಳಾ ಸಮಿತಿಯ ಅಧ್ಯಕ್ಷೆ ಶಾಂತಲಾ ಸೀತಾರಾಮ ಆಚಾರ್ಯ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರ ಎಂ.ಕೆ. ಬಾಲಕೃಷ್ಣ ಆಚಾರ್ಯ, ಮಹಿಳಾ ಸಮಿತಿಯ ಪ್ರಧಾನ‌ ಕಾರ್ಯದರ್ಶಿ ರಶ್ಮಿತಾ ಅರವಿಂದ ಆಚಾರ್ಯ, ಕೋಶಾಧಿಕಾರಿ ವಿದ್ಯಾ ಸುರೇಶ್ ಆಚಾರ್ಯ, ಮಾಜಿ ಅಧ್ಯಕ್ಷೆ ಗೀತಾ ಯೋಗೀಶ್ ಆಚಾರ್ಯ ಉಪಸ್ಥಿತರಿದ್ದರು.

Previous Post Next Post

Contact Form