ಮೂಡುಬಿದಿರೆ: ಇಲ್ಲಿನ ಕಲ್ಲಬೆಟ್ಟುವಿನ ನೀರಲ್ಕೆ ಎಂಬಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ನಿಗೂಢವಾಗಿದೆ.
ಡಿಸೆಂಬರ್ 6ರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಮೃತನನ್ನು ಕೃಷ್ಣಪ್ಪ ಅವರ ಪುತ್ರ ಸಂಜಯ್ ಯಾನೆ ಮುನ್ನಾ (26) ಎಂದು ಗುರುತಿಸಲಾಗಿದೆ.
ಮೂಲಗಳ ಪ್ರಕಾರ ಸಂಜಯ್ ಅವರು ತಮ್ಮ ಮನೆ ಬಳಿಯ ಹಾಡಿಯಲ್ಲಿ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆ ಸ್ಥಳೀಯರ ಗಮನಕ್ಕೆ ಬಂದ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ನಡೆಸಿದ್ದಾರೆ.
Tags
Suicide

